

ರಾಣೆಬೆನ್ನೂರು: ಎಟಿಎಂನಲ್ಲಿ ಹಣ ಡ್ರಾ ಮಾಡಿಕೊಡುವ ನೆಪದಲ್ಲಿ ಎಟಿಎಂ ಕಾರ್ಡ್ ಬದಲಾಯಿಸಿ ವ್ಯಕ್ತಿಯೊಬ್ಬ ಖಾತೆಯಿಂದ 1.20 ಲಕ್ಷ ರೂ. ಡ್ರಾ ಮಾಡಿಕೊಂಡು ವಂಚಿಸಿರುವ ಘಟನೆ ನಗರದ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.
ತಾಲೂಕಿನ ಮೈದೂರ ಗ್ರಾಮದ ಪ್ರವಿಣ ಮಲ್ಲಪ್ಪ ಹಟ್ಟಿ (45) ಎಂಬುವರಿಗೆ ಮೋಸ ಮಾಡಿರುವುದು.
ಇವರು ಎಟಿಎಂನಲ್ಲಿ ಹಣ ಡ್ರಾ ಮಾಡಿಸಿಕೊಳ್ಳುವ ಸಲುವಾಗಿ ಬಂದಾಗ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ಹಣ ಡ್ರಾ ಮಾಡಿಕೊಡುವುದಾಗಿ ನಂಬಿಸಿ ಕಾರ್ಡ್ ತೆಗೆದುಕೊಂಡಿದ್ದಾನೆ. ನಂತರ ನಿಮ್ಮ ಹಣ ಬರುತ್ತಿಲ್ಲವೆಂದು ಆತನಿಗೆ ಬೇರೆ ಕಾರ್ಡ್ ಕೊಟ್ಟು ಕಳುಹಿಸಿ, ಈತ ಹಣ ಡ್ರಾ ಮಾಡಿಕೊಂಡು ಪರಾರಿಯಾಗಿದ್ದಾನೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.