ವಿಬಿ ಜಿ ರಾಮ್ ಜಿ ಜನರ ದಾರಿ ತಪ್ಪಿಸುತ್ತಿರುವ ಕೈ

ಹಿರೇಕೆರೂರ ತಾಲೂಕಿನ ಸಾತೇನಹಳ್ಳಿ ಗ್ರಾಮದಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯ ಜಾಗೃತ ಅಭಿಯಾನಕ್ಕೆ ಮಾಜಿ ಸಚಿವ ಬಿ.ಸಿ.ಪಾಟೀಲ ಚಾಲನೆ ನೀಡಿದರು. ಸಂಜೀವಯ್ಯ ಕಬ್ಬಿಣಕಂತೀಮಠ, ರವಿಶಂಕರ ಬಾಳಿಕಾಯಿ, ಮನೋಹರ ವಡ್ಡಿನಕಟ್ಟಿ, ಜಗದೀಶ ದೊಡ್ಡಗೌಡ್ರ, ಸಿ.ಎಸ್. ಚಳಗೇರಿ, ಸಿ.ಬಿ. ಮಾಳಗಿ ಇದ್ದರು.
ಹಿರೇಕೆರೂರ ತಾಲೂಕಿನ ಸಾತೇನಹಳ್ಳಿ ಗ್ರಾಮದಲ್ಲಿ ವಿಬಿ ಜಿ ರಾಮ್ ಜಿ ಯೋಜನೆಯ ಜಾಗೃತ ಅಭಿಯಾನಕ್ಕೆ ಮಾಜಿ ಸಚಿವ ಬಿ.ಸಿ.ಪಾಟೀಲ ಚಾಲನೆ ನೀಡಿದರು. ಸಂಜೀವಯ್ಯ ಕಬ್ಬಿಣಕಂತೀಮಠ, ರವಿಶಂಕರ ಬಾಳಿಕಾಯಿ, ಮನೋಹರ ವಡ್ಡಿನಕಟ್ಟಿ, ಜಗದೀಶ ದೊಡ್ಡಗೌಡ್ರ, ಸಿ.ಎಸ್. ಚಳಗೇರಿ, ಸಿ.ಬಿ. ಮಾಳಗಿ ಇದ್ದರು.
Published on
ವಿಜಯವಾಣಿ ಸುದ್ದಿಜಾಲ ಹಿರೇಕೆರೂರ
ವಿಬಿ ಜಿ ರಾಮ್ ಜಿ ಯೋಜನೆ ಬಗ್ಗೆ ರಾಜ್ಯ ಸರ್ಕಾರ ಸುಳ್ಳು ಹೇಳಿ ಬಡವರ ಕೂಲಿಕಾರರ ದಾರಿ ತಪ್ಪಿಸುತ್ತಿದೆ. ಈ ಯೋಜನೆ ವಿರೋಧಿಸಿ ರೈತ, ಕೃಷಿ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.
ತಾಲೂಕಿನ ಸಾತೇನಹಳ್ಳಿ ಗ್ರಾಮದಲ್ಲಿ ತಾಲೂಕು ಬಿಜೆಪಿ ಮಂಡಲದ ವತಿಯಿಂದ ಏರ್ಪಡಿಸಿದ್ದ ವಿಬಿ ಜಿ ರಾಮ್ ಜಿ ಯೋಜನೆಯ ಜಾಗೃತ ಅಭಿಯಾನದಲ್ಲಿ ಭಾನುವಾರ ಸಿಹಿ ಹಂಚುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಹಿಂದಿನ ನರೇಗಾ ಯೋಜನೆಯಲ್ಲಿ ಪ್ರತಿವರ್ಷ ನೂರು ದಿನಗಳ ಉದ್ಯೋಗ ಖಾತ್ರಿ ಇತ್ತು. ಈಗ 125 ದಿನಗಳಿಗೆ ಹೆಚ್ಚಿಗೆ ಮಾಡಿದೆ. ಈ 125 ದಿನಗಳನ್ನು ಗ್ರಾಮ ಪಂಚಾಯತಿಗಳೇ ನಿರ್ಧಾರ ಮಾಡಬಹುದು. ಆದರೆ, ಕೇಂದ್ರ ಸರ್ಕಾರ ನಿರ್ಧಾರ ಮಾಡುತ್ತಿದೆ ಎಂಬ ಭೀತಿಯನ್ನು ಕಾರ್ಮಿಕರಲ್ಲಿ ಹುಟ್ಟಿಸುತ್ತಿದೆ. ಈ ಯೋಜನೆಯಲ್ಲಿ ಒಂದು ವಾರದಿಂದ ಹದಿನೈದು ದಿನಗಳ ಒಳಗೆ ಕಡ್ಡಾಯವಾಗಿ ಕಾರ್ಮಿಕರ ವೇತನ ಕೊಡುವ ಬಗ್ಗೆ ಸ್ಪಷ್ಟವಾಗಿದೆ. ಅದಾಗ್ಯೂ ರಾಜ್ಯ ಸರ್ಕಾರ ಅನುದಾನ ಸಿಗದೇ ಇರುವ ವಿಚಾರವನ್ನು ಹೇಳಿ ಕಾರ್ಮಿಕರಿಗೆ ಈ ಯೋಜನೆಯಿಂದ ದೂರ ಮಾಡುತ್ತಿದೆ ಎಂದರು.
ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಸಂಜೀವಯ್ಯ ಕಬ್ಬಿಣಕಂತೀಮಠ ಮಾತನಾಡಿ, ನರೇಗಾ ಯೋಜನೆಯ ಕೆಲವೊಂದು ರೂಪು ರೇಷೆಗಳನ್ನು ಬದಲಾವಣೆ ಮಾಡಿದ್ದರಿಂದ 125 ದಿವಸದ ಉದ್ಯೋಗ ಕೊಡುವುದರಿಂದ ಗ್ರಾಮೀಣ ಪ್ರದೇಶದ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವ ಸಾಧ್ಯವಾಗುತ್ತದೆ. ಈ ಯೋಜನೆಯಲ್ಲಿದ್ದ ಭ್ರಷ್ಟಾಚಾರ ಸಂಪೂರ್ಣ ನಿವಾರಣೆ ಆಗುತ್ತದೆ. ಬಡವರು, ಕಾರ್ಮಿಕರು ದೀನದಲಿತರಿಗೆ ನ್ಯಾಯ ಸಮ್ಮತ ಕೆಲಸ ಮತ್ತು ಕೂಡಲೇ ವೇತನ ಸಿಗುವ ವ್ಯವಸ್ಥೆ ಆಗುತ್ತದೆ. ಪಂಚಾಯತಿಗಳು ಯೋಜನೆಯನ್ನು ರೂಪಿಸುವ, ಅನುಷ್ಠಾನ ಮಾಡುವ ಸರ್ವ ಸ್ವತಂತ್ರವನ್ನು ಹೊಂದುತ್ತವೆ. ರಾಜ್ಯ ಸರ್ಕಾರದ ಮಧ್ಯಪ್ರವೇಶದಿಂದ ಮುಕ್ತಾಯವಾಗುತ್ತವೆ. ಗ್ರಾಮೀಣ ಅವಶ್ಯಕತೆಯ ತಕ್ಕಂತೆ ಆಸ್ತಿಗಳ ನಿರ್ಮಾಣವಾಗುತ್ತದೆ. ಇದರಿಂದ ವಿಕಸಿತ ಭಾರತದ ಗುರಿಗೆ ಗ್ರಾಮೀಣ ಪ್ರದೇಶದ ಬದುಕು ಮತ್ತು ವಿಕಾಸ ಮುಖಾಂತರ ಸಾಧನೆ ಹಾಗೂ ಕಲ್ಪನೆಯಿಂದ ವಿಬಿ ಜಿ ರಾಮ್ ಜಿ ಯೋಜನೆಯನ್ನು ಕೇಂದ್ರ ಸರ್ಕಾರ ಬದಲಾವಣೆ ಮಾಡಿ ಜಾರಿಗೆ ತಂದಿದೆ ಎಂದರು.
ಈ ವೇಳೆ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ವಿಕಸಿತ ಭಾರತ ಉದ್ಯೋಗ ಖಾತ್ರಿ ಮತ್ತು ಅಜೀವಿಕಾ ಮಿಷನ್ ಗ್ರಾಮೀಣ ಕಾಯ್ದೆ ಕುರಿತು ಜಾಗೃತಿ ಮೂಡಿಸಲಾಯಿತು. ಯುವ ಮೋರ್ಚಾ ಅಧ್ಯಕ್ಷ ಜಗದೀಶ ದೊಡ್ಡಗೌಡರ, ಕೆಸಿಸಿ ಬ್ಯಾಂಕ್ ನಿರ್ದೇಶಕ ರವಿಶಂಕರ ಬಾಳಿಕಾಯಿ, ಮನೋಹರ ವಡ್ಡಿನಕಟ್ಟಿ, ಸಿ.ಎಸ್. ಚಳಗೇರಿ, ಸಿ.ಬಿ.ಮಾಳಗಿ ಹಾಗೂ ಕೂಲಿ ಕಾರ್ಮಿಕರು, ಗ್ರಾಮಸ್ಥರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net