

ತಾಲೂಕಿನಾದ್ಯಂತ ಪ್ರಮುಖ ರಸ್ತೆಗಳು (
Bad roads)
ಮಳೆಯಿಂದಾಗಿ ತೀವ್ರವಾಗಿ ಹದಗೆಟ್ಟಿದ್ದು, ಸಾರ್ವಜನಿಕರು ಹಾಗೂ ವಾಹನ ಸವಾರರು ದಿನನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.
ತಾಲೂಕಿನಾದ್ಯಂತ ರಸ್ತೆಗಳು ತೀವ್ರವಾಗಿ ಹದಗೆಟ್ಟಿದ್ದು, ಅನುದಾನ ಬಿಡುಗಡೆಯಾಗಿದ್ದರೂ ಸಮರ್ಪಕ ಕಾಮಗಾರಿ ನಡೆಯುತ್ತಿಲ್ಲ. ಅಧಿಕಾರಿಗಳು ಮತ್ತು ಗುತ್ತಿಗೆದಾರರ ಒಳಒಪ್ಪಂದದಿಂದಾಗಿ ಕಳಪೆ ಕೆಲಸವಾಗುತ್ತಿದೆ. ರಸ್ತೆ ಬದಿಯ ಗಿಡಗಂಟಿಗಳನ್ನು ತೆರವುಗೊಳಿಸುತ್ತಿಲ್ಲ. ತಕ್ಷಣ ಸಾರ್ವಜನಿಕರಿಗೆ ಸೂಕ್ತ ರಸ್ತೆ ಸೌಲಭ್ಯ ಕಲ್ಪಿಸದಿದ್ದರೆ ಲೋಕೋಪಯೋಗಿ ಇಲಾಖೆ ಕಚೇರಿ ಎದುರು ಹೋರಾಟ ನಡೆಸಲಾಗುವುದು.
— ಮೃತ್ಯುಂಜಯ ಕೊಪ್ಪದ, ತಾಲೂಕು ಜೆಡಿಎಸ್ ಅಧ್ಯಕ್ಷ.
ಬ್ಯಾಡಗಿ ತಾಲೂಕಿನಲ್ಲಿ ಹಾಯ್ದು ಹೋಗಿರುವ ಗಜೇಂದ್ರಗಡ-ಸೊರಬ ರಸ್ತೆ ದುರಸ್ತಿಗೆ ಅನುದಾನ ಲಭ್ಯವಿದ್ದು, ಟೆಂಡರ್ ಪ್ರಕ್ರಿಯೆ ರ್ಪೂಣಗೊಂಡಿದೆ. ಇದರಲ್ಲಿ ತಗ್ಗು-ಗುಂಡಿ ಮುಚ್ಚುವುದು ಹಾಗೂ ಜಂಗಲ್ ಕಟಾವು ಸೇರಿದೆ. ಮಳೆಯಿಂದಾಗಿ ಕೆಲಸ ತಡವಾಗಿದ್ದು, ಒಂದೆರಡು ದಿನಗಳಲ್ಲಿ ದುರಸ್ತಿ ಕಾಮಗಾರಿ ಆರಂಭವಾಗಲಿದೆ.
— ಎ.ಎಸ್. ಪಾಟೀಲ, ಲೋಕೋಪಯೋಗಿ ಇಲಾಖೆ ಇಂಜಿನಿಯರ್.