ಬಾರ್ ಆ್ಯಂಡ್ ರೆಸ್ಟೋರೆಂಟ್ ಕಟ್ಟಡದಿಂದ ಜಿಗಿದು ಯುವಕ ಸಾವು

Crime
Crime
Published on

ರಾಣೆಬೆನ್ನೂರು: ಸಾಲದ ಬಾಧೆಯಿಂದ ಮನನೊಂದು ಯುವಕನೊಬ್ಬ ಬಾರ್ ಆ್ಯಂಡ್ ರೆಸ್ಟೋರೆಂಟ್ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಟನೆ ಮಂಗಳವಾರ ನಗರದ ಹಳೇ ಪಿ.ಬಿ. ರಸ್ತೆಯಲ್ಲಿ ನಡೆದಿದೆ.

ತಾಲೂಕಿನ ಅಸುಂಡಿ ಗ್ರಾಮದ ಪ್ರವಿಣ ಚಂದ್ರಪ್ಪ ಹೂಲಿಹಳ್ಳಿ (25) ಮೃತ ಯುವಕ.

ಈತ 4.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಆದರೆ, ಸಾಲ ತೀರಿಸಲಾಗದೆ ಮದ್ಯ ಸೇವನೆಗೆ ಅಂಟಿಕೊಂಡಿದ್ದ. ಅಲ್ಲದೆ ಸಾಲದ ಸಮಸ್ಯೆ ಹೆಚ್ಚಾಗಿದ್ದರಿಂದ ಆತ ಕೆಲ ದಿನಗಳಿಂದ ಮಾನಸಿಕವಾಗಿ ನೊಂದಿದ್ದ. ಇದೇ ಕಾರಣದಿಂದ ಬೆಳಗ್ಗೆ ಬಾರ್ಗೆ ಬಂದು ಮದ್ಯ ಸೇವಿಸಿ ಕಟ್ಟಡದ ಮೇಲಿನಿಂದ ಜಿಗಿದಿದ್ದಾನೆ ಎನ್ನಲಾಗಿದೆ.

ಘಟನೆ ತಿಳಿದ ತಕ್ಷಣ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಈ ಕುರಿತು ಶಹರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಯುವಕನ ಸಾವಿನಿಂದ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

---------

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net