

ಶಿಗ್ಗಾಂವ: ಮದುವೆ ಮಾಡಿಕೊಳ್ಳಲು ಕನ್ಯೆ ಸಿಗಲಿಲ್ಲವೆಂದು ಕ್ಷೌರಿಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ಪಟ್ಟಣದ ಮ್ಯಾಗೇರಿ ಓಣಿಯಲ್ಲಿ ನಡೆದಿದೆ.
ಮನೋಜ ಬಸವರಾಜ ಹಡಪದ (27) ಆತ್ಮಹತ್ಯೆ ಮಾಡಿಕೊಂಡ ಯುವಕ.
ಈತ ಕ್ಷೌರಿಕ ವೃತ್ತಿ ಮಾಡಿಕೊಂಡಿದ್ದು ಮದುವೆ ಮಾಡಿಕೊಳ್ಳಲು ಯಾವುದೇ ಕನ್ಯೆ ಸಿಗದ ಕಾರಣ ಮನನೊಂದು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.