ಬೈಕ್ ಡಿಕ್ಕಿಯಾಗಿ ಪಾದಚಾರಿ ಸಾವು

Crime
Crime
Published on

ಬ್ಯಾಡಗಿ: ಬೈಕ್ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಕದರಮಂಡಲಗಿ ಗ್ರಾಮದ ಬಳಿ ನಡೆದಿದೆ.

ಗ್ರಾಮದ ಹೊನ್ನಪ್ಪ ಭೀಮಪ್ಪ ನಾಯ್ಕರ್ (55) ಮೃತ ವ್ಯಕ್ತಿ.

ಇವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಬೈಕ್ ಬಂದು ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇವರನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net