ಬೈಕ್ ಗೆ ಟಿಪ್ಪರ್ ಡಿಕ್ಕಿಯಾಗಿ ಓರ್ವ ಸಾವು

Crime
Crime
Published on

ರಾಣೆಬೆನ್ನೂರ: ಟಿಪ್ಪರ್ ಲಾರಿ ಡಿಕ್ಕಿಯಾಗಿ ಬೈಕ್ ಮೇಲೆ ತೆರಳುತ್ತಿದ್ದ ಯುವಕನೊಬ್ಬ ಮೃತಪಟ್ಟು, ಇಬ್ಬರು ಗಾಯಗೊಂಡ ಹಾಗೂಘಟನೆ ತಾಲೂಕಿನ ಹಲಗೇರಿ-ಕೋಡ ರಸ್ತೆಯಲ್ಲಿ ನಡೆದಿದೆ.

ದಾವಣಗೆರೆ ತಾಲೂಕಿನ ಪುಟಗನಾಳು ತಾಂಡಾದ ಆಕಾಶನಾಯ್ಕ ಟಿ. ತಿಪ್ಪೇಶನಾಯ್ಕ (17) ಮೃತ ಯುವಕ. ಬೈಕ್ ಸವಾರ ತಿಪ್ಪೇಶ ಹಾಗೂ ಶಿವಕುಮಾರ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಇವರು ಕೋಡ ಗ್ರಾಮದಿಂದ ಹಲಗೇರಿ ಕಡೆಗೆ ಬರುತ್ತಿದ್ದ ಸಮಯದಲ್ಲಿ ಟಿಪ್ಪರ್ ಲಾರಿ ಬಂದು ಡಿಕ್ಕಿ ಹೊಡೆದಿದೆ. ಇದರಿಂದ ಆಕಾಶನಾಯ್ಕ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ. ಗಾಯಾಳನ್ನು ಚಿಕಿತ್ಸೆಗಾಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಹಲಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net