

ಹಾವೇರಿ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೃದ್ಧರೊಬ್ಬರಿಗೆ ಬೈಕ್ ಡಿಕ್ಕಿ ಹೊಡೆದು ವೃದ್ಧ ಮೃತಪಟ್ಟ ಘಟನೆ ಇಲ್ಲಿಯ ವಿನಾಯಕ ನಗರದಲ್ಲಿ ನಡೆದಿದೆ.
ಇಲ್ಲಿಯ ಇಜಾರಿಲಕಮಾಪುರದ ಯಚ್ಚರಪ್ಪ ಮಹಾದೇವಪ್ಪ ಪತ್ತಾರ (64) ಮೃತ ವೃದ್ಧ.
ಇವರು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ಬೈಕ್ವೊಂದು ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಯಚ್ಚರಪ್ಪ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.