ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಸವಾರ ಸಾವು

Crime
Crime
Published on

ಶಿಗ್ಗಾಂವಿ: ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಚಾಲಕ ಮೃತಪಟ್ಟ ಘಟನೆ ತಾಲೂಕಿನ ಹುಲಗೂರ ರಸ್ತೆಯಲ್ಲಿ ನಡೆದಿದೆ.

ತಾಲೂಕಿನ ಬನ್ನಿಕೊಪ್ಪ ಗ್ರಾಮದ ಅರುಣಕುಮಾರ ಚಿದಾನಂದ ಪೂಜಾರ (23) ಮೃತ ಬೈಕ್ ಸವಾರ.

ಈತ ಹುಲಗೂರ ಕಡೆಯಿಂದ ಬನ್ನಿಕೊಪ್ಪಕ್ಕೆ ಬರುತ್ತಿದ್ದ ಸಮಯದಲ್ಲಿ ದಾರಿ ಮಧ್ಯೆ ಬೈಕ್ ನಿಯಂತ್ರಣ ತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net