

ಹಿರೇಕೆರೂರ: ಬೈಕ್ ಸ್ಕಿಡ್ ಆಗಿ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಟನೆ ತಾಲೂಕಿನ ಯಲವದಹಳ್ಳಿ ಬಳಿ ನಡೆದಿದೆ.
ತಾಲೂಕಿನ ಹಾದ್ರಿಹಳ್ಳಿ ಗ್ರಾಮದ ಸಿದ್ದಪ್ಪ ಶಿವಪ್ಪ ಹೊಟ್ಟಿಗೌಡ್ರ (40) ಮೃತ ವ್ಯಕ್ತಿ.
ಇವರು ಕೋಡ&ರಾಣೆಬೆನ್ನೂರ ರಸ್ತೆಯಲ್ಲಿ ಬರುತ್ತಿದ್ದ ಸಮಯದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದು ಮೃತಪಟ್ಟಿದ್ದಾರೆ. ಈ ಕುರಿತು ಹಂಸಬಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.