ಬೈಕ್ ಟ್ಯಾಕ್ಸಿ ಸಂಚಾರ ನಿಷೇಧಕ್ಕೆ ಆಟೋರಿಕ್ಷಾ ಚಾಲಕರ ಆಗ್ರಹ

ಮನವಿ ಸಲ್ಲಿಕೆ
ಮನವಿ ಸಲ್ಲಿಕೆ
Published on

ರಾಣೆಬೆನ್ನೂರು: ನಗರದಲ್ಲಿ ರ್ಯಾಪಿಡೋ ಆ್ಯಪ್ ಮೂಲಕ ಆನ್ಲೈನ್ ಬುಕ್ಕಿಂಗ್ ಮಾಡಿಕೊಂಡು ವೈಟ್ ಬೋರ್ಡ್ ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಕರನ್ನು ಬಾಡಿಗೆಗೆ ಸಾಗಿಸುತ್ತಿರುವ ಬೈಕ್ ಟ್ಯಾಕ್ಸಿ ಸಂಚಾರವನ್ನು ಸಂರ್ಪೂಣ ನಿಷೇಧಿಸಬೇಕು ಎಂದು ಆಗ್ರಹಿಸಿ ಆಟೋ ಚಾಲಕರ ಒಕ್ಕೂಟದ ವತಿಯಿಂದ ಇಲ್ಲಿಯ ಬಸ್ ನಿಲ್ದಾಣದ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

ಒಕ್ಕೂಟದ ಗೌರವ ಅಧ್ಯಕ್ಷ ರವೀಂದ್ರಗೌಡ ಪಾಟೀಲ ಮಾತನಾಡಿ, ನಗರದಲ್ಲಿ ಕಳೆದ ಕೆಲವು ದಿನಗಳಿಂದ ರ್ಯಾಪಿಡೋ ಆ್ಯಪ್ ಮೂಲಕ ಬೈಕ್ ಟ್ಯಾಕ್ಸಿ ಸಂಚಾರ ನಡೆಯುತ್ತಿದೆ. ವಿವಿಧ ಜಿಲ್ಲೆಗಳಿಂದ ನಗರಕ್ಕೆ ಬರುವ ಸಾರ್ವಜನಿಕರು ಆ್ಯಪ್ ಮೂಲಕ ಬೈಕ್ ಬುಕ್ ಮಾಡಿಕೊಂಡು ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ಪ್ರಯಾಣಿಸುತ್ತಿದ್ದಾರೆ. ಗೃಹ ಬಳಕೆಯ ವೈಟ್ ಬೋರ್ಡ್ ದ್ವಿಚಕ್ರ ವಾಹನಗಳನ್ನು ಪ್ರಯಾಣಿಕರ ಬಾಡಿಗೆಗೆ ಬಳಸಲು ಸಾರಿಗೆ ಇಲಾಖೆಯಿಂದ ಅನುಮತಿ ಇಲ್ಲದಿದ್ದರೂ ಅನಧಿಕೃತವಾಗಿ ಸಂಚಾರ ನಡೆಸಲಾಗುತ್ತಿದೆ ಎಂದು ಆರೋಪಿಸಿದರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 2500 ಆಟೋರಿಾಗಳು ಸಂಚರಿಸುತ್ತಿವೆ. ಶಾಲಾ ಮಕ್ಕಳು, ಮಹಿಳೆಯರು, ವಯೋವೃದ್ಧರು, ಗಭಿರ್ಣಿಯರು ಹಾಗೂ ಅಂಗವಿಕಲರು ಸೇರಿದಂತೆ ನಿತ್ಯ ಸಾವಿರಾರು ಪ್ರಯಾಣಿಕರನ್ನು ಸುರಕ್ಷಿತವಾಗಿ ಒಂದು ಸ್ಥಳದಿಂದ ಮತ್ತೊಂದು ಸ್ಥಳಕ್ಕೆ ತಲುಪಿಸುವ ಕಾರ್ಯ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬೈಕ್ ಟ್ಯಾಕ್ಸಿಗಳ ಹಾವಳಿ ಆಟೋ ಚಾಲಕರ ಜೀವನೋಪಾಯದ ಮೇಲೆ ಪರಿಣಾಮ ಬೀರುತ್ತಿದೆ.

ಸಾಮಾನ್ಯವಾಗಿ ಒಬ್ಬ ಆಟೋ ಚಾಲಕ 3 ಲಕ್ಷ ರೂ. ಸಾಲ ಪಡೆದು ಆಟೋ ಖರೀದಿಸಿ, ಪ್ರತಿ ತಿಂಗಳು ಸಾಲದ ಕಂತು ಪಾವತಿಸುವುದರ ಜತೆಗೆ ಕುಟುಂಬ ನಿರ್ವಹಣೆ ಮಾಡಬೇಕಾಗಿದೆ. ಪ್ರತಿವರ್ಷ ವಾಹನದ ಪಾಸಿಂಗ್, ವಾಯುಮಾಲಿನ್ಯ ತಪಾಸಣೆ, ವಿಮೆ, ನಿರ್ವಹಣೆ ಸೇರಿದಂತೆ ವಿವಿಧ ವೆಚ್ಚಗಳನ್ನು ಭರಿಸಬೇಕಾಗುತ್ತದೆ. ಬೆಳಗ್ಗೆ 8ರಿಂದ ರಾತ್ರಿ 10 ಗಂಟೆಯವರೆಗೆ ದುಡಿದರೂ ದಿನಕ್ಕೆ ಸುಮಾರು 500 ಬಾಡಿಗೆ ಗಳಿಸಲು ಹರಸಾಹಸ ಪಡಬೇಕಾದ ಪರಿಸ್ಥಿತಿ ಇದೆ.

ಆದರೆ, ಬೈಕ್ ಟ್ಯಾಕ್ಸಿಗಳು ಸೂಕ್ತ ಇಲಾಖೆ ನೋಂದಣಿ ಹಾಗೂ ಅನುಮತಿ ಇಲ್ಲದೆ ಸಂಚರಿಸುತ್ತಿವೆ ಎಂಬ ದೂರುಗಳಿವೆ. ಹೀಗಾಗಿ ಸಾರಿಗೆ ಇಲಾಖೆ ಹಾಗೂ ಪೊಲೀಸರು ನಗರದಲ್ಲಿ ಬೈಕ್ ಟ್ಯಾಕ್ಸಿಗಳ ಸಂಚಾರದ ಬಗ್ಗೆ ಪರಿಶೀಲನೆ ನಡೆಸಿ, ನಿಯಮ ಉಲ್ಲಂಘಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಬಂದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿಕಾರಿ ಜಗದೀಶ ಆರ್. ಹಾಗೂ ಶಹರ ಪೊಲೀಸ್ ಠಾಣೆ ಪಿಎಸ್ಐ ಪರಮೇಶಪ್ಪ ಅವರಿಗೆ ಮನವಿ ಸಲ್ಲಿಸಿದರು.

ಆಟೋರಿಾ ಚಾಲಕರಾದ ಜಗದೀಶ ಕೆರೂಡಿ, ನಾಗರಾಜ ಹಾರೋಗೊಪ್ಪ, ರಮೇಶ ಮ್ಯಾಗೇರಿ, ಮನೋಜ ಚುಬ್ಳೆಕರ, ಕೃಷ್ಣಪ್ಪ ಹರಿಹರ, ಕೊಟ್ರೇಶ ಕೋಟೂರ, ರಾಜು ಅಸುಂಡಿ, ಅಜೇಯ ಹುಲ್ಲತ್ತಿ, ಹನುಮಂತಪ್ಪ ಯಡಚಿ, ನಂದೀಶ ಮುದಗಣ್ಣನವರ, ಹಾಲೇಶ ಹರಿಹರ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net