

ಬ್ಯಾಡಗಿ: ಟಾಟಾ 407 ವಾಹನ ಡಿಕ್ಕಿಯಾಗಿ ಬಾಲಕನೊಬ್ಬ ಮೃತಪಟ್ಟ ಘಟನೆ ತಾಲೂಕಿನ ಬಡಮಲ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ನಡೆದಿದೆ.
ಅರ್ಜುನ (ಅರುಣ) ಲಮಾಣಿ ಮೃತ ಬಾಲಕ.
ಈತ ಶಾಲೆ ಆವರಣದಲ್ಲಿ ಆಟವಾಡುತ್ತಿದ್ದ ಸಮಯದಲ್ಲಿ ಮಾವಿನಕಾಯಿ ಕೊಯ್ಯಲು ಬಂದಿದ್ದ ಟಾಟಾ 407 ವಾಹನ ಡಿಕ್ಕಿ ಹೊಡೆದು ಮೃತಪಟ್ಟಿದ್ದಾನೆ. ಈ ಕುರಿತು ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.