ಪಟ್ಟಣದ ಬೆಟ್ಟದ ಮಲ್ಲೇಶ್ವರ ಗುಡ್ಡದ ಸಮಾಜ ಕಲ್ಯಾಣ ಇಲಾಖೆ ಹಿಂಭಾಗದಲ್ಲಿರುವ ಡಾ.ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದ ಐವರು ವಿದ್ಯಾರ್ಥಿಗಳು ನ.೧೬ ರಂದು ಈಜಲು ಕೆರೆಗೆ ತೆರಳಿದ್ದಾಗ ರಾಹುಲ್ ಕೇಸರಿನಲ್ಲಿ ಸಿಲುಕಿ ಹೊರಬರಲಾಗದೆ ಮೃತಪಟ್ಟದ್ದನು. ಆದರೆ, ಮೃತದೇಹ ಮಾತ್ರ ಪತ್ತೆಯಾಗಿರಲಿಲ್ಲ. ಅಗ್ನಿಶಾಮಕದಳ ಹಾಗೂ ಮುಳುಗು ತಜ್ಞರು ತೀವ್ರ ಶೋಧ ನಡೆಸಿದ ಪರಿಣಾಮ ನ.೧೮ ರಂದು ಮೃತದೇಹ ದೊರೆತಿದೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.