

ಹಾವೇರಿ: ಮೊಬೈಲ್ ಕ್ಯಾಂಟೀನ್ಗೆ ಪ್ರೋತ್ಸಾಹಧನ ಮಂಜೂರು ಮಾಡಲು 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಸಮಾಲೋಚಕರೊಬ್ಬರು ಕರ್ನಾಟಕ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಸಮಾಲೋಚಕ ಮಲಕಸಾಬ ಬಾಪುಸಾಬ ನದಾ್ ಬಲೆಗೆ ಬಿದ್ದವನು.
ಸವಣೂರು ತಾಲೂಕಿನ ಚಿಕ್ಕಮರಳಿಹಳ್ಳಿ ಗ್ರಾಮದ ರವಿಚಂದ್ರ ನಿಂಗಪ್ಪ ಮೈದೂರು ಎಂಬುವರು ಮೊಬೈಲ್ ಕ್ಯಾಂಟೀನ್ ಪ್ರೋತ್ಸಾಹಧನಕ್ಕಾಗಿ ಅಜಿರ್ ಸಲ್ಲಿಸಿದ್ದರು. ಪ್ರೋತ್ಸಾಹಧನ ಮಂಜೂರು ಮಾಡಿಸಲು ಮಲಕಸಾಬ 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ.
ಈ ಕುರಿತು ರವಿಚಂದ್ರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ನಗರದ ಜಿಲ್ಲಾ ಕ್ರೀಡಾಂಗಣದ ಬಳಿ ಲಂಚದ ಹಣ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಮಲಕಸಾಬನನ್ನು ಬಂಧಿಸಿದ್ದಾರೆ.
ದಾವಣಗೆರೆ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎಸ್. ಕೌಲಾಪುರೆ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಸಿ. ಮಧುಸೂದನ ಹಾಗೂ ಸಿಬ್ಬಂದಿ ಕಾರ್ಯಾಚರಣೆಯಲ್ಲಿದ್ದರು.