

ಶಿಗ್ಗಾಂವಿ: ತನ್ನ ತಮ್ಮ ಮೃತಪಟ್ಟಿದ್ದನ್ನು ಮನಸ್ಸಿಗೆ ಹಚ್ಚಿಕೊಂಡು ಅಣ್ಣ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಟ್ಟಣದ ಹುಲಗೂರ ರಸ್ತೆಯಲ್ಲಿ ನಡೆದಿದೆ.
ಮಾಂತೇಶ ಲಕ್ಷ್ಮ ಕೊಣನಕೇರಿ (24) ಮೃತನು.
ಈತನ ತಮ್ಮ ಇತ್ತೀಚೆಗೆ ಮೃತಪಟ್ಟಿದ್ದ. ಇದನ್ನು ಮನಸ್ಸಿಗೆ ಹಚ್ಚಿಕೊಂಡ ಮಾಂತೇಶ ಕೂಡ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.