

ಫುಟ್ಪಾತ್ ತೆರವಿಗೆ ಈಗಾಗಲೇ ಯೋಜನೆ ಸಿದ್ಧಪಡಿಸಲಾಗಿದೆ. ಕಳೆದ ವರ್ಷದ ಸಭೆಯ ಬಳಿಕ ವ್ಯಾಪಾರಿಗಳು ತಮ್ಮ ಬೇಡಿಕೆಗಳನ್ನು ಸಲ್ಲಿಸಿದ್ದರು. ಶೀಘ್ರದಲ್ಲೇ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಿ ರಸ್ತೆಯನ್ನು ಮುಕ್ತಗೊಳಿಸಲಾಗುವುದು.
| ವೈ.ಕೆ. ಜಗದೀಶ, ಮುಖ್ಯಾಧಿಕಾರಿ, ಪುರಸಭೆ ಹಾನಗಲ್ಲ.
ಫುಟ್ಪಾತ್ ತೆರವಿಗಾಗಿ ನಾವು ಪುರಸಭೆಗೆ ಹಲವು ಬಾರಿ ಮನವಿ ಸಲ್ಲಿಸಿದ್ದೇವೆ. ಸಾರ್ವಜನಿಕ ಹಿತಾಸಕ್ತಿಯ ಈ ಕೆಲಸದಲ್ಲಿ ತಾಲೂಕು ಆಡಳಿತ ಸಂಪೂರ್ಣ ವಿಫಲವಾಗಿದೆ. ಅಧಿಕಾರಿಗಳು ಮೌನಕ್ಕೆ ಶರಣಾದರೆ ನಾವು ನ್ಯಾಯಾಲಯದ ಮೊರೆ ಹೋಗುವುದು ಅನಿವಾರ್ಯ.
| ಪ್ರಶಾಂತ ಮುಚ್ಚಂಡಿ, ಸ್ಥಳೀಯ ನಾಗರಿಕ.