ಮರಕ್ಕೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

Crime
Crime
Published on

ಹಿರೇಕೆರೂರ: ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಮೃತಪಟ್ಟ ಘಟನೆ ತಾಲೂಕಿನ ತಾವರಗಿ-ರಟ್ಟಿಹಳ್ಳಿ ರಸ್ತೆಯಲ್ಲಿ ನಡೆದಿದೆ.

ಪಟ್ಟಣದ ಇಬ್ರಾಹಿಂ ನಗರದ ರಿಹಾನಾಬಾನು ಅಬ್ದುಲ್ಹಮೀದ್ ಪಾಟೇಗೇರಿ ಮೃತ ಮಹಿಳೆ. ಕಾರು ಓಡಿಸುತ್ತಿದ್ದ ಅಬ್ದುಲ್ಹಮೀದ್ಗೆ ಗಂಭೀರ ಗಾಯವಾಗಿದ್ದು ಚಿಕಿತ್ಸೆಗಾಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇವರು ಹಿರೇಕೆರೂರಿನಿಂದ ರಟ್ಟಿಹಳ್ಳಿಗೆ ತೆರಳುತ್ತಿದ್ದ ಸಮಯದಲ್ಲಿ ದಾರಿ ಮಧ್ಯೆ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಚಿಕಿತ್ಸೆಗಾಗಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ರಿಹಾನಾಬಾನು ಮೃತಪಟ್ಟಿದ್ದಾರೆ. ಈ ಕುರಿತು ಹಿರೇಕೆರೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net