

ಶಿಗ್ಗಾಂವಿ: ಚಾಲಕನ ನಿಯಂತ್ರಣ ತಪ್ಪಿ ಕಾರು ರಸ್ತೆಯ ಬದಿ ಕಾಲುವೆಗೆ ಬಿದ್ದ ಪರಿಣಾಮ ಕಾರು ಚಾಲಕ ಸ್ಥಳದಲ್ಲಿಯೆ ಮೃತಪಟ್ಟು ಮತ್ತೊಬ್ಬ ಗಾಯಗೊಂಡ ಘಟನೆ ತಾಲೂಕಿನ ತಡಸ ಬಳಿ ಸೋಮವಾರ ನಡೆದಿದೆ.
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡದ ನಿವಾಸಿ ಹಾಗೂ ತಹಸೀಲ್ದಾರ್ ಕಚೇರಿಯ ಗ್ರಾಮ ಲೆಕ್ಕಾಧಿಕಾರಿ ಗೋಪಾಲ ಎಂ. (38) ಮೃತ ವ್ಯಕ್ತಿ. ಮತ್ತೊಬ್ಬ ಮಂಜುನಾಥ ಮರಲಬಾವಿ (30) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದು ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರು ಕಾರಿನಲ್ಲಿ ಮುಂಡಗೋಡದಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಈ ಸಮಯದಲ್ಲಿ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿಯ ಕಾಲುವೆಗೆ ಬಿದ್ದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡು ಗೋಪಾಲ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ. ಈ ಕುರಿತು ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.