

ಹಾವೇರಿ: ಕಾರೊಂದು ಬೈಕ್ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಹಿಂಬದಿ ಕುಳಿತ್ತಿದ್ದ ಮಹಿಳೆ ಮೃತಪಟ್ಟ ಘಟನೆ ತಾಲೂಕಿನ ಗೌರಾಪೂರ ಗ್ರಾಮದಲ್ಲಿ ನಡೆದಿದೆ.
ಲಕ್ಷ$್ಮವ್ವ ಭೀಮಪ್ಪ ಮುಗದೂರ ಮೃತ ಮಹಿಳೆ.
ಇವರು ಬೈಕ್ ಮೇಲೆ ಕುಳಿತು ಹಾವೇರಿ ಕಡೆಗೆ ತೆರಳುತ್ತಿದ್ದ ಸಮಯದಲ್ಲಿ ಹಿಂದಿನಿಂದ ಕಾರು ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಲಕ್ಷ$್ಮವ್ವ ಸ್ಥಳದಲ್ಲಿಯೆ ಮೃತಪಟ್ಟಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.