ವಾಣಿಜ್ಯ ಮಳಿಗೆಗಳನ್ನು ಬಹಿರಂಗ ಹರಾಜು ಮಾಡಲು ಆಗ್ರಹ

ಮನವಿ ಸಲ್ಲಿಕೆ
ಮನವಿ ಸಲ್ಲಿಕೆ
Published on

ರಾಣೆಬೆನ್ನೂರು: ನಗರಸಭೆಯ ವಾಣಿಜ್ಯ ಮಳಿಗೆಗಳ ಹರಾಜು ಮಾಡಬೇಕು. ಮಾದರ ಹೊಂಡ ಅಭಿವೃದ್ಧಿ ಪಡಿಸಬೇಕು. ಕೆಎಚ್ಬಿ ಕಾಲನಿಗೆ ಮೂಲಸೌಕರ್ಯ ಒದಗಿಸುವುದು ಸೇರಿ ವಿವಿಧ ಬೇಡಿಕೆ ಈಡೇರಿಸಲು ಒತ್ತಾಯಿಸಿ ರಾಜ್ಯ ರೈತ ಸಂದ ನೇತೃತ್ವದಲ್ಲಿ ಸಾರ್ವಜನಿಕರು ನಗರಸಭೆ ಆಯುಕ್ತ ಕ್ಕೀರಪ್ಪ ಇಂಗಳಗಿ ಅವರಿಗೆ ಮನವಿ ಸಲ್ಲಿಸಿದರು.

ನೇತೃತ್ವ ವಹಿಸಿದ್ದ ರೈತ ಸಂದ ತಾಲೂಕು ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ಕೆಎಚ್ಬಿ ಕಾಲನಿಯ ಅಭಿವೃದ್ಧಿಗಾಗಿ ಅಲ್ಲಿನ ಹಿರಿಯ ನಾಗರಿಕರು ಸಾಕಷ್ಟು ಬಾರಿ ಸಂಬಂಧಪಟ್ಟ ಇಲಾಖೆಗೆ ಮನವಿ ಮೂಲಕ ಮತ್ತು ಕಚೇರಿಗೆ ಅಲೆದಾಡಿ ಅಲೆದಾಡಿ ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಕೂಡಲೇ ಅಲ್ಲಿಗೆ ಮೂಲಸೌಕರ್ಯ ಕಲ್ಪಿಸಬೇಕು.

ನಗರದ ಪ್ರಸಿದ್ಧ ಮಾದರ ಹೊಂಡ ಅಭಿವೃದ್ದಿಪಡಿಸಲು ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ರೀತಿ ಕ್ರಮ ಕೈಗೊಳ್ಳದಿರುವುದು ಖಂಡನೀಯ. ನಗರಸಭೆ ವ್ಯಾಪ್ತಿಯ ವಾಣಿಜ್ಯ ಮಳಿಗೆಗಳ ಬಾಡಿಗೆ ಕಳೆದ ಮಾರ್ಚ್ ತಿಂಗಳಿಗೆ ಅಂತ್ಯಗೊಂಡಿದ್ದು, 2 ತಿಂಗಳುಗಳು ಕಳೆದರೂ ಇನ್ನೂ ಹರಾಜು ಮಾಡದೆ ಇರುವುದು ಸರಿಯಲ್ಲ.

ಆದ್ದರಿಂದ ಕೂಡಲೇ ನಗರಸಭೆ ಅಧಿಕಾರಿಗಳು ನಮ್ಮ ಬೇಡಿಕೆಗೆ ಸ್ಪಂದಿಸಬೇಕು. ಇಲ್ಲವಾದರೆ ಮುಂದಿನ ದಿನದಲ್ಲಿ ನಗರಸಭೆ ಎದುರು ಧರಣಿ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರಮುಖರಾದ ಕಿರಣ ಗುಳೇದ, ಕೋಟ್ರಮ್ಮ ಕಾಯಕದ, ಮಂಜುನಾಥ ಗುಡ್ಡಣ್ಣನವರ, ನಾಗಮ್ಮ ತಳವಾರ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net