ಮಕ್ಕಳ ಶೈಕ್ಷಣಿಕ ಪ್ರಗತಿಗಾಗಿ ಕಂಪ್ಯೂಟರ್ ವಿತರಣೆ

ಹಿರೇಕೆರೂರ ತಾಲೂಕಿನ ಮಡ್ಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಉಚಿತವಾಗಿ ಕಂಪ್ಯೂಟರ್ ಮತ್ತು ಪ್ರಾಜೆಕ್ಟರ್ ವಿತರಣೆ ಮಾಡಿದ ಹಿನ್ನಲೆಯಲ್ಲಿ ಅಶೋಕ ಪಾಟೀಲ ಅವರನ್ನು ಸನ್ಮಾನಿಸಲಾಯಿತು. ಮಾಜಿ ಸಚಿವ ಬಿ.ಸಿ. ಪಾಟೀಲ, ಡಿ.ಸಿ. ಪಾಟೀಲ ಇತರರಿದ್ದರು.

Published on
ಹಿರೇಕೆರೂರ: ಗ್ರಾಮೀಣ ಪ್ರದೇಶದ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿ ಎಂಬ ದೃಷ್ಟಿಯಿಂದ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ಕಂಪ್ಯೂಟರ್ ಮತ್ತು ಪ್ರಾಜೆಕ್ಟರ್ ವಿತರಣೆ ಮಾಡುತ್ತಿದ್ದೇವೆ ಎಂದು ಅಮೇರಿಕದ ಶಿಕ್ಷಣ ಸೇವಾ ಪೌಂಢೇಶನ್ ಅಧ್ಯಕ್ಷ ಅಶೋಕ ಪಾಟೀಲ ಹೇಳಿದರು.
ತಾಲೂಕಿನ ಮಡ್ಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಇತ್ತೀಚಿಗೆ ಅಮೇರಿಕದ ಶಿಕ್ಷಣ ಸೇವಾ ಪೌಂಢೇಶನ್ ವತಿಯಿಂದ ಉಚಿತವಾಗಿ ಕಂಪ್ಯೂಟರ್ ಮತ್ತು ಪ್ರಾಜೆಕ್ಟರ್ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಾಜಿ ಸಚಿವ ಬಿ.ಸಿ. ಪಾಟೀಲ ಮಾತನಾಡಿ, ಈಗಾಗಲೇ ಕ್ಷೇತ್ರದ ಗ್ರಾಮೀಣ ಭಾಗದ ಅನೇಕ ಸರ್ಕಾರಿ ಶಾಲೆಗಳಿಗೆ ಉಚಿತವಾಗಿ ಕಂಪ್ಯೂಟರ್ ಮತ್ತು ಪ್ರಾಜೆಕ್ಟರ್ ವಿತರಣೆ ಮಾಡಿದ್ದಾರೆ. ವಿದ್ಯಾರ್ಥಿಗಳು ಇದರ ಸದ್ಭಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಡಿ.ಸಿ. ಪಾಟೀಲ ಮತ್ತು ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರು, ಸದಸ್ಯರು ಹಾಗೂ ಶಾಲೆಯ ಮುಖ್ಯ ಶಿಕ್ಷಕ ಮತ್ತು ಶಿಕ್ಷಕರು, ಗ್ರಾಮಸ್ಥರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net