

ಹಾವೇರಿ: ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಶನಿವಾರ ಆಯೋಜಿಸಿದ್ದ ವಿಶೇಷ ಲೋಕ ಅದಾಲತ್ನಲ್ಲಿ ಇತ್ಯರ್ಥಕ್ಕೆ ಬಾಕಿಯಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿ ಇತ್ಯರ್ಥಕ್ಕೆ ಗುರುತಿಸಲಾದ ಒಟ್ಟು 1255 ಪ್ರಕರಣಗಳ ಪೈಕಿ 166 ಪ್ರಕರಣಗಳು ಇತ್ಯರ್ಥಗೊಂಡಿದ್ದು 3.04 ಕೋಟಿ ರೂ. ಮೊತ್ತದ ರಾಜಿಯಾಗಿದೆ.
ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳಲ್ಲಿ ಗುರುತಿಸಲಾದ ಒಟ್ಟು 937 ಪ್ರಕರಣಗಳಲ್ಲಿ 142 ಪ್ರಕರಣಗಳು ಇತ್ಯರ್ಥಗೊಂಡಿದ್ದು, 2.66 ಕೋಟಿ ರೂ. ಮೊತ್ತದ ರಾಜಿಯಾಗಿದೆ. ವ್ಯಾಜ್ಯ ಪೂರ್ವ ಪ್ರಕರಣಗಳಲ್ಲಿ ಇತ್ಯರ್ಥಕ್ಕೆ ಗುರುತಿಸಲಾದ ಒಟ್ಟು 318 ಪ್ರಕರಣಗಳಲ್ಲಿ 24 ಪ್ರಕರಣಗಳು ಇತ್ಯರ್ಥಗೊಂಡಿದ್ದು, 38 ಲಕ್ಷ ರೂ. ಮೊತ್ತದ ರಾಜಿಯಾಗಿದೆ ಎಂದು ಅವರು ತಿಳಿಸಿದ್ದಾರೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿರಾದಾರ ದೇವಿಂದ್ರಪ್ಪಾ ಎನ್. ಮತ್ತು ಹಿರಿಯ ದಿವಾಣಿ ನ್ಯಾಯಾಧೀಶೆ ಶ್ರೀಶೈಲಜಾ ಎಚ್.ವಿ. ತಿಳಿಸಿದ್ದಾರೆ.