

ರಾಣೆಬೆನ್ನೂರ: ಇಲ್ಲಿಯ ನ್ಯಾಯಾಲಯದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ 1520 ಪ್ರಕರಣಗಳ ಪೈಕಿ 1310 ಪ್ರಕರಣಗಳು ಇತ್ಯರ್ಥಗೊಂಡಿವೆ. ಇದರಲ್ಲಿ 3 ಕೌಟುಂಬಿಕ ಕಲಹ ಪ್ರಕರಣವನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ.
ತಾಲೂಕಿನ ಎಲ್ಲ ನ್ಯಾಯಾಧೀಶರು, ವಕೀಲರ ಸಂ, ಅಭಿಯೋಜನಾ ಇಲಾಖೆ, ಪೊಲೀಸ್ ಇಲಾಖೆ ಹಾಗೂ ಕಗಾರರ ಸಹಕಾರದಿಂದ ಅದಾಲತ್ ಯಶಸ್ವಿಯಾಗಿದೆ ಎಂದು ಪ್ರಧಾನ ದಿವಾಣಿ ನ್ಯಾಯಾಧೀಶ ಆದಿತ್ಯಕುಮಾರ ಎಚ್.ಆರ್. ತಿಳಿಸಿದ್ದಾರೆ.