ಬೆಳೆಹಾನಿಯಾದ ರೈತರಿಗೆ ಸೂಕ್ತ ಪರಿಹಾರ ನೀಡಲು ಆಗ್ರಹ

ಮನವಿ ಸಲ್ಲಿಕೆ
ಮನವಿ ಸಲ್ಲಿಕೆ
Published on

ರಾಣೆಬೆನ್ನೂರು: ನಗರ ಸೇರಿ ತಾಲೂಕಿನಾದ್ಯಂತ ಸುರಿದ ಆಲಿಕಲ್ಲು ಮಳೆಗೆ ಹಾನಿಯಾದ ಬೆಳೆಗಳಿಗೆ ಹಾಗೂ ಎತ್ತು ಮೃತಪಟ್ಟ ರೈತರಿಗೆ ಕೂಡಲೇ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಗ್ರೇಡ್&2 ತಹಸೀಲ್ದಾರ್ ಅರುಣ ಕಾರಗಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ರೈತ ಸಂದ ತಾಲೂಕು ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ತಾಲೂಕಿನ ಎರಡು ದಿನ ಸುರಿದ ಮಳೆಯಿಂದ ಭಾರಿ ಪ್ರಮಾಣದಲ್ಲಿ ಭತ್ತ, ಬಾಳೆ, ಅಡಿಕೆ, ತೆಂಗು ಹಾನಿಯಾಗಿದೆ. ಆಥಿರ್ಕವಾಗಿ ರೈತರಿಗೆ ಬಹಳಷ್ಟು ನಷ್ಟವಾಗಿದೆ. ಆದ್ದರಿಂದ ಸರ್ಕಾರ ಕೂಡಲೇ ಮಳೆಯಿಂದ ಹಾನಿಯಾದ ರೈತರಿಗೆ ಮಧ್ಯಂತರ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಮುಖರಾದ ಸೋಮರೆಡ್ಡಿ ಹಾದಿಮನಿ, ರಮೇಶ ಕುಸಗೂರ, ಮಹ್ಮದ್ ರಫೀಕ್ ಚಳಗೇರಿ, ಕೋಟ್ರಪ್ಪ ಅಂಗಡಿ, ಬಸವರಾಜ ಕೊಳ್ಳಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net