ಸಿಲಿಂಡರ್ ಹೆಚ್ಚಿನ ಬೆಲೆಗೆ ಮಾರಿದರೆ ಕ್ರಮ ಜರುಗಿಸಿ

ಮನವಿ ಸಲ್ಲಿಕೆ
ಮನವಿ ಸಲ್ಲಿಕೆ
Published on

ರಾಣೆಬೆನ್ನೂರ: ನಗರದಲ್ಲಿ ಸಿಲಿಂಡರ್ ಕೊರತೆಯಿಂದ ಕೆಲವರು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದು, ಕೂಡಲೇ ಅಂಥವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಶುಕ್ರವಾರ ತಹಸೀಲ್ದಾರ್ ಆರ್.ಎಚ್. ಭಾಗವಾನ್ ಮೂಲಕ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

ಸಂಟನೆಯ ಕಾರ್ಯದರ್ಶಿ ಶಿವಕುಮಾರ ಜಾಧವ ಮಾತನಾಡಿ, ನಗರದಲ್ಲಿ ಅಗತ್ಯಕ್ಕೆ ತಕ್ಕಂತೆ ಸಿಲಿಂಡರ್ಗಳು ಬರುತ್ತಿದೆ. ಆದರೆ, ಕೆಲವರು ಹೆಚ್ಚಿನ ಬೆಲೆ ನೀಡುವವರಿಗೆ ಮಾತ್ರ ಸಿಲಿಂಡರ್ ಕೊಡುತ್ತಿದ್ದಾರೆ ಎಂಬ ಆರೋಪವಿದೆ. ಆದ್ದರಿಂದ ಈ ಕುರಿತು ತಾಲೂಕು ಆಡಳಿತ ಪರಿಶೀಲಿಸಿ ಹೆಚ್ಚಿನ ಬೆಲೆಗೆ ಸಿಲಿಂಡರ್ ಮಾರಾಟ ಮಾಡುವವರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ತಾಲೂಕ ಅಧ್ಯಕ್ಷ ಚಂದ್ರಪ್ಪ ಬಣಕಾರ, ಪರಶುರಾಮ ಕುರುವತ್ತಿ, ಕೊಟ್ರೇಶಪ್ಪ ಎಮ್ಮಿ, ಸಿದ್ಧಾರೂಢ ಗುರುಟ, ಪರಶುರಾಮ ಕೋಲಕರ, ನಿಂಗಪ್ಪ ಬೀರಣ್ಣನವರ, ಶಂಕರ ಹಳ್ಳಪ್ಪನವರ, ಗೋಪಿ ಕುಂದಾಪುರ, ಪ್ರವಿಣಕುಮಾರ ಬಿ.ವೈ., ಕಿರಣಗೌಡ ಹೊಸಮನಿ, ನಂದೀಶ ಅಟವಾಳಗಿ, ಕೃಷ್ಣ ವೇಷಗಾರ, ದಿಳ್ಳೆಪ್ಪ ಸತ್ಯಪ್ಪನವರ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net