

ರಾಣೆಬೆನ್ನೂರ: ತಾಲೂಕಿನ ದೇವರಗುಡ್ಡ ಗ್ರಾಮದ ಶ್ರೀ ಮಾಲತೇಶ ಸ್ವಾಮಿ ದೇವಸ್ಥಾನದ ನೂತನ ಆಡಳಿತ ಮಂಡಳಿಯ ಮೂವರು ಸದಸ್ಯರ ವಿರುದ್ಧ ಜಾತಿ ನಿಂಧನೆ ಹಾಗೂ ಹಲ್ಲೆ ಆರೋಪದಡಿ ಇಲ್ಲಿಯ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಾಗಿದೆ.
ಗ್ರಾಮದ ಹಾಗೂ ನೂತನ ಆಡಳಿತ ಮಂಡಳಿ ಸದಸ್ಯರಾದ ಭರಮಪ್ಪ ಏಳುಕೋಟೆಪ್ಪ ಊಮಿರ್ (40), ನಿಂಗಪ್ಪ ಪಾನಿಯಪ್ಪ ಬೀರಪ್ಪನವರ (42) ಹಾಗೂ ವಿನಾಯಕ ಯಲ್ಲಪ್ಪ ತಳಗೇರಿ (24) ಎಂಬುವರ ವಿರುದ್ಧ ಪ್ರಕರಣ ದಾಖಲಾಗಿರುವುದು.
ಇವರ ವಿರುದ್ಧ ಈ ಹಿಂದಿನ ಆಡಳಿತ ಮಂಡಳಿಯಲ್ಲಿ ಕಾರ್ಯದಶಿರ್ಯಾಗಿದ್ದ ಶೇಖಪ್ಪ ವೀರಪ್ಪ ಭಜಂತ್ರಿ (60) ಎಂಬುವರು ದೂರು ದಾಖಲಿಸಿದ್ದಾರೆ. ಆರೋಪಿತರು ನನ್ನನ್ನು ಕೆಲಸದಿಂದ ತೆಗೆದು ಹಾಕಲಾಗಿದೆ ಎಂದು ಹೇಳಿ ಜಾತಿ ನಿಂದನೆ ಮಾಡಿ ಹೊಡೆದಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.