ನಾಡು ಕಂಡ ಅಪರೂಪದ ರಾಜಕಾರಣಿ ಅರಸು: arasu birthday

ಶಿಗ್ಗಾಂವ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ ಸರ್ಕಾರಿ ಆಡಳಿತ ಕಚೇರಿಗಳ ಸಂಕೀರ್ಣದಲ್ಲಿ ಗುರುವಾರ ಏರ್ಪಡಿಸಿದ್ದ ಡಿ.ದೇವರಾಜ ಅರಸು ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಡಾ.ಎಸಿ ವಾಲಿ ಉದ್ಘಾಟಿಸಿದರು.ಶಶಿಕಾಂತ ರಾಠೋಡ, ಇಂದೂಧರ ಮುತ್ತಳ್ಳಿ ಇತರರಿದ್ದರು.
ಶಿಗ್ಗಾಂವ ಪಟ್ಟಣದ ಡಾ.ಬಿ.ಆರ್. ಅಂಬೇಡ್ಕರ ಸರ್ಕಾರಿ ಆಡಳಿತ ಕಚೇರಿಗಳ ಸಂಕೀರ್ಣದಲ್ಲಿ ಗುರುವಾರ ಏರ್ಪಡಿಸಿದ್ದ ಡಿ.ದೇವರಾಜ ಅರಸು ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಡಾ.ಎಸಿ ವಾಲಿ ಉದ್ಘಾಟಿಸಿದರು.ಶಶಿಕಾಂತ ರಾಠೋಡ, ಇಂದೂಧರ ಮುತ್ತಳ್ಳಿ ಇತರರಿದ್ದರು.
Published on

ವಿಜಯವಾಣಿ ಸುದ್ದಿಜಾಲ ಶಿಗ್ಗಾಂವ

ದೇವರಾಜ ಅರಸು ರಾಜ್ಯ ಕಂಡ ಅಪರೂಪದ ರಾಜಕಾರಣಿ. ರಾಜ್ಯದ ದೀರ್ಘಾವಧಿ ಮುಖ್ಯಮಂತ್ರಿಯಾದರೂ ಜನಸಾಮಾನ್ಯರಂತೆ ಸರಳತೆಯಿಂದ ಬಾಳಿ, ಜನಪರ ಚಿಂತನೆಯಲ್ಲೇ ಜೀವಿಸಿದ ಅಪೂರ್ವ ಜೀವಿ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ.ಎ.ಸಿ. ವಾಲಿ ಹೇಳಿದರು.
ತಾಲೂಕು ಆಡಳಿತ, ತಾಪಂ, ಪುರಸಭೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಸರ್ಕಾರಿ ಆಡಳಿತ ಕಚೇರಿಗಳ ಸಂಕೀರ್ಣದಲ್ಲಿ ಗುರುವಾರ ಏರ್ಪಡಿಸಿದ್ದ ಡಿ.ದೇವರಾಜ ಅರಸು 111ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ದೇವರಾಜು ಅರಸು ಅವರ ದೂರದೃಷ್ಟಿಯ ಆಡಳಿತದ ನಿರ್ಧಾರಗಳು ಕ್ರಾಂತಿಕಾರಿ ಬದಲಾವಣೆಗೆ ನಾಂದಿಯಾದವು ಎಂದರು.
ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಉಪನ್ಯಾಸಕ ಶಶಿಕಾಂತ ರಾಠೋಡ ದೇವರಾಜ ಅರಸು ಅವರ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿ, ಅಖಂಡ ಕರ್ನಾಟಕದ ಭಾವನೆಗಳನ್ನು ಒಗ್ಗೂಡಿಸಿ, ಕರ್ನಾಟಕ ಏಕೀಕರಣದ ರೂವಾರಿ. ಪ್ರಪ್ರಥಮವಾಗಿ ವಿದ್ಯಾರ್ಥಿ ನಿಲಯ, ವಿದ್ಯಾರ್ಥಿವೇತನ ಜಾರಿಗೆ ತರುವ ಮೂಲಕ ಹಿಂದುಳಿದ, ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಕಾರಣಿಕರ್ತರಾದ ನಾಯಕ ದೇವರಾಜ ಅರಸು ಎಂದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಇಂದೂಧರ ಮುತ್ತಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಆಯೋಗ ರಚನೆ ಮಾಡಿ, ಸಮಾಜದ ಕಟ್ಟ ಕಡೆಯ ವರ್ಗದ ಜನರಿಗೂ ಸಮಾನ ಅವಕಾಶ ಕಲ್ಪಿಸಿದ ಸಾಮಾಜಿಕ ಪರಿವರ್ತನೆಯ ಹರಿಕಾರರು ಎಂದರು.
ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ ಸಾಳುಂಕೆ ಕಾರ್ಯಕ್ರಮದ ಅಧ್ಯಕ್ಷತೆ ಮಾತನಾಡಿದರು. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ತಾಲೂಕಿನ ವಸತಿ ನಿಲಯಗಳ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ತಾಲೂಕು ಆರೋಗ್ಯಾಧಿಕಾರಿ ಡಾ.ಸತೀಶ ಎ.ಆರ್, ಕರೆಪ್ಪ ಕಟ್ಟಿಮನಿ, ಕಾಳಪ್ಪ ಕಮ್ಮಾರ, ಫಕ್ಕೀರಪ್ಪ ಕುಂದುರ, ಲಕ್ಷಣ ಕುಂದಗೋಳ ಸೇರಿದಂತೆ ಇತರರಿದ್ದರು. ವಸತಿ ನಿಲಯ ಮೇಲ್ವಿಚಾರಕ ರಮೇಶ ಹರಿಜನ ಕಾರ್ಯಕ್ರಮ ನಿರ್ವಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net