ವೈದ್ಯನ ಮೇಲೆ ಹಲ್ಲೆ: 8 ಜನರ ವಿರುದ್ಧ ಎಫ್ಐಆರ್

Crime
Crime
Published on

ರಾಣೆಬೆನ್ನೂರ: ರೋಗಿ ಮೃತಪಟ್ಟ ಹಿನ್ನೆಲೆಯಲ್ಲಿ ವೈದ್ಯರ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ 8 ಜನರ ವಿರುದ್ಧ ಇಲ್ಲಿಯ ಶಹರ ಪೊಲೀಸ್ ಠಾಣೆಯಲ್ಲಿ ಗುರುವಾರ ಪ್ರಕರಣ ದಾಖಲಾಗಿದೆ.

ನಗರದ ಮಹ್ಮದ್ ಯಾಸೀನ್, ಅಬ್ದುಲ್ ಖಾದರ್, ಅಹ್ಮದ್ ರಫೀಕ್, ಅಬ್ದುಲ್ ಅಜೀಜ್ ಸೇರಿ 8 ಜನರ ವಿರುದ್ಧ ಪ್ರಕರಣ ದಾಖಲಾಗಿರುವುದು.

ಇವರ ವಿರುದ್ಧ ನಗರದ ಸಾಯಿ ಆಸ್ಪತ್ರೆ ವೈದ್ಯ ಡಾ. ಅಭಿನಂದನ್ ಸಾವಕಾರ ದೂರು ದಾಖಲಿಸಿದ್ದಾರೆ. ಆರೋಪಿತರು ತಮ್ಮ ತಂದೆಯನ್ನು ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ ಕರೆತಂದಿದ್ದರು. ನಾವು ಸರಿಯಾಗಿ ಚಿಕಿತ್ಸೆ ನೀಡಿದ್ದೇವೆ. ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಆದರೆ, ಆರೋಪಿತರು ಇದಕ್ಕೆ ವೈದ್ಯರ ನಿರ್ಲಕ್ಷ$್ಯವೆಂದು ಆರೋಪಿಸಿ ನಮ್ಮ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net