

ರಾಣೆಬೆನ್ನೂರ: ಎಥಿನಾಲ್ ತುಂಬಿಕೊಂಡು ಹೋಗುತ್ತಿದ್ದ ಲಾರಿ ಪಲ್ಟಿಯಾಗಿ ಧಗಧಗನೆ ಹೊತ್ತಿ ಉರಿದ ಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ&48ರಲ್ಲಿ ಗುರುವಾರ ನಡೆದಿದೆ.
ಲಾರಿಯು ಹುಬ್ಬಳ್ಳಿಯಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಸಮಯದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಸರ್ವೀಸ್ ರಸ್ತೆ ದಾಟಿ ಜಮೀನುವೊಂದರ ಬಳಿ ಬಿದ್ದು ನಿಂತಿದೆ. ಇದರಿಂದ ಬೆಂಕಿ ಹತ್ತಿಕೊಂಡಿದ್ದು ಕೆಲ ಹೊತ್ತಿನಲ್ಲಿ ಧಗಧಗನೆ ಉರಿಯಲು ಶುರುವಾಗಿದೆ. ಚಾಲಕ ಕೂಡಲೇ ಪಾರಾಗಿದ್ದು, ಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.