ವಿಪರೀತ ಮದ್ಯ ಸೇವಿಸಿದ ವ್ಯಕ್ತಿ ಸಾವು

Crime
Crime
Published on

ರಾಣೆಬೆನ್ನೂರ: ವಿಪರೀತ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯೊಬ್ಬ ಮದ್ಯ ಸೇವಿಸಿದ ಅಮಲಿನಲ್ಲಿ ಹಸಿವಿನಿಂದ ಬಳಲಿ ಮೃತಪಟ್ಟ ಘಟನೆ ಇಲ್ಲಿಯ ಹಲಗೇರಿ ರಸ್ತೆಯಲ್ಲಿ ನಡೆದಿದೆ.

ಬಳ್ಳಾರಿ ಜಿಲ್ಲೆ ಕಂಪ್ಲಿ ತಾಲೂಕಿನ ಮಾರುತಿ ನಗರದ ಪ್ರಸಾದ ಹನುಮಂತರಾವ್ (42) ಮೃತ ವ್ಯಕ್ತಿ.

ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಇದರಿಂದ ಮದ್ಯ ಸೇವಿಸಿದ ಅಮಲಿನಲ್ಲಿ ಹಸಿವಿನಿಂದ ಬಳಲಿ ಮೃತಪಟ್ಟಿದ್ದಾನೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net