

ಶಿಗ್ಗಾಂವಿ: ವಿಪರೀತ ಮದ್ಯ ಸೇವಿಸಿದ ಅಮಲಿನಲ್ಲಿ ಎತ್ತಿನ ಉಣ್ಣೆಗೆ ಹೊಡೆಯುವ ಎಣ್ಣಿ ಕುಡಿದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ತಾಲೂಕಿನ ಕೆಂಗಾಪುರ ಗ್ರಾಮದಲ್ಲಿ ನಡೆದಿದೆ.
ಬಸವರಾಜ ನಾಗಪ್ಪ ಹೂಗಾರ (45) ಮೃತ ವ್ಯಕ್ತಿ.
ಈತ ವಿಪರೀತ ಮದ್ಯ ಸೇವಿಸುತ್ತಿದ್ದ. ಮದ್ಯ ಸೇವನೆ ಬಿಡುವಂತೆ ಬುದ್ಧಿವಾದ ಹೇಳಿದರೂ ಕೇಳಿರಲಿಲ್ಲ. ಹೀಗಾಗಿ ಮದ್ಯ ಸೇವಿಸಿದ ಅಮಲಿನಲ್ಲಿ ಎತ್ತಿನ ಉಣ್ಣೆಗೆ ಹೊಡೆಯುವ ಎಣ್ಣೆ ಕುಡಿದು ಮೃತಪಟ್ಟಿದ್ದಾನೆ. ಈ ಕುರಿತು ಹುಲಗೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.