

ರಾಣೆಬೆನ್ನೂರ: ಜಮೀನಿನ ಕೆಲಸ ಮುಗಿಸಿಕೊಂಡು ಬೈಕ್ ಮೇಲೆ ಮನೆಗೆ ಬರುತ್ತಿದ್ದ ರೈತ ಯಾವುದೋ ವಾಹನಕ್ಕೆ ಡಿಕ್ಕಿ ಹೊಡೆದು ಮೃತಪಟ್ಟ ಘಟನೆ ತಾಲೂಕಿನ ಗುಡ್ಡದ ಆನ್ವೇರಿ ಗ್ರಾಮದ ಬಳಿ ಶುಕ್ರವಾರ ನಡೆದಿದೆ.
ನಗರದ ಕುರುಬಗೇರಿ ಓಣಿಯ ನಿಂಗಪ್ಪ ಭರಮಪ್ಪ ಪಾರೇರ (54) ಮೃತ ರೈತ.
ಇವರು ಗುಡಗೂರ ಬಳಿ ತಮ್ಮ ಜಮೀನಿನ ಕೆಲಸಕ್ಕೆ ಹೋಗಿ ವಾಪಸ್ ಮನೆಗೆ ಬರುತ್ತಿದ್ದ ಸಮಯದಲ್ಲಿ ಮುಂದೆ ಹೊರಟಿದ್ದ ಯಾವುದೋ ವಾಹನಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.