

ರಟ್ಟಿಹಳ್ಳಿ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನಾಗವಂದ ಗ್ರಾಮದಲ್ಲಿ ನಡೆದಿದೆ.
ಮಂಜುನಾಥ ಬಸಪ್ಪ ಹೊಸಕಟ್ಟಿ (45) ಮೃತ ರೈತ.
ಇವರು ಕೃಷಿಗಾಗಿ 2 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸರಿಯಾಗಿ ಬಾರದೆ ಹಾಳಾಗಿ ಹೋಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.