

ಬ್ಯಾಡಗಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಬುಡಪನಹಳ್ಳಿಯಲ್ಲಿ ನಡೆದಿದೆ.
ಪ್ರಕಾಶ ಕರಿಯಪ್ಪ ಕರೂರ (37) ಮೃತ ರೈತ.
ಇವರು ಬ್ಯಾಂಕ್ ಹಾಗೂ ವಿವಿಧ ಸಂ ಸಂಸ್ಥೆಗಳಲ್ಲಿ 2.05 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂಪೂರ್ಣ ಹಾಳಾಗಿ ಹೋಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.