

ಹಾವೇರಿ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತೆರೆದಹಳ್ಳಿಯಲ್ಲಿ ಸೋಮವಾರ ನಡೆದಿದೆ.
ಹೊನ್ನನಗೌಡ ಚನ್ನಬಸನಗೌಡ ಹೊನ್ನನಗೌಡ್ರ (39) ಮೃತ ರೈತ.
ಇವರು ಕೃಷಿಗಾಗಿ ಬ್ಯಾಂಕ್, ಸಹಕಾರ ಸಂಘ ಹಾಗೂ ವಿವಿಧ ಫೈನಾನ್ಸ್ಗಳಲ್ಲಿ 6.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂರ್ಪೂಣ ಹಾಳಾಗಿ ಹೋಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯ ವಿಷ ಸೇವಿಸಿ ಮೃತಪಟ್ಟಿದ್ದಾರೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.