

ಹಾವೇರಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗುತ್ತಲ ಗ್ರಾಮದಲ್ಲಿ ನಡೆದಿದೆ.
ಮಾಲತೇಶ ಹನುಮಂತಪ್ಪ ಗೊರವರ (35) ಮೃತ ರೈತ.
ಇವರು ಕೃಷಿಗಾಗಿ 5.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂರ್ಪೂಣ ಹಾಳಾಗಿ ಹೋಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನನೊಂದು ಜಮೀನಿನಲ್ಲಿದ್ದ ರೇಷ್ಮೆ ಗೋದಾಮಿನಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಈ ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.