ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾದ ರೈತ

Crime
Crime
Published on

ಹಾವೇರಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಟನೆ ತಾಲೂಕಿನ ಚಿಕ್ಕಲಿಂಗದಹಳ್ಳಿಯಲ್ಲಿ ನಡೆದಿದೆ.

ನಿಂಗರಾಜ ಕ್ಕೀರಪ್ಪ ಹುಲ್ಲಾಳ (38) ಮೃತ ರೈತ.

ಇವರು 2 ಎಕರೆ ಜಮೀನು ಹೊಂದಿದ್ದು ಬ್ಯಾಂಕ್ ಹಾಗೂ ಕೈಗಡವಾಗಿ 4.35 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂರ್ಪೂಣ ಹಾಳಾಗಿ ಹೋಗಿತ್ತು. ಇದರಿಂದ ಸಾಲ ತೀರಿಸಲಾಗದೆ ಮನನೊಂದು ಮನೆಯಲ್ಲಿಯೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net