

ಹಾನಗಲ್ಲ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹಿರೇಕಣಗಿ ಗ್ರಾಮದಲ್ಲಿ ನಡೆದಿದ.
ಪ್ರಲ್ಹಾದ ಉಡಚಪ್ಪ ಕಾಳೇರ (52) ಮೃತ ರೈತ.
ಇವರು ಕೃಷಿಗಾಗಿ ಬ್ಯಾಂಕ್ ಹಾಗೂ ಕೈಗಡವಾಗಿ 11 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾಳಾಗಿದ್ದರಿಂದ ಸಾಲ ತೀರಿಸಲಾಗದೆ ಜಮೀನಿನಲ್ಲಿಯೆ ಮರಕ್ಕೆ ನೇಣು ಬಿಗಿದುಕೊಂಡಿದ್ದಾರೆ. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.