

ಹಾವೇರಿ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.
ಸಂಕಪ್ಪ ಈರಪ್ಪ ಕರೇಗೊಂಡ್ರ ಮೃತ ರೈತ.
ಇವರು ಬ್ಯಾಂಕ್ ಹಾಗೂ ಕೈಗಡವಾಗಿ 6ರಿಂದ 7 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಕೂಡ ಸರಿಯಾಗಿ ಬಾರದ ಕಾರಣ ಆಥಿರ್ಕವಾಗಿ ನಷ್ಟವಾಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.