ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ

Crime
Crime
Published on

ಹಾವೇರಿ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಗುತ್ತಲ ತಾಂಡಾದಲ್ಲಿ ನಡೆದಿದೆ.

ಈರಪ್ಪ ದೇವಲೆಪ್ಪ ಲಮಾಣಿ (51) ಮೃತ ರೈತ.

ಇವರು ಬ್ಯಾಂಕ್ ಹಾಗೂ ಕೈಗಡವಾಗಿ 3.70 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಮೆಕ್ಕೆಜೋಳ ಬೆಳೆ ಹಾಳಾಗಿತ್ತು. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಗುತ್ತಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net