ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Crime
Crime
Published on

ರಾಣೆಬೆನ್ನೂರು: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಮಾಕನೂರ ಗ್ರಾಮದಲ್ಲಿ ನಡೆದಿದೆ.

ಮಧುಕುಮಾರ ಬಸವರಾಜ ಗುಂಡೋಜಿ (33) ಮೃತ ರೈತ.

ಇವರು ಕೃಷಿಗಾಗಿ ಬ್ಯಾಂಕ್ ಹಾಗೂ ಕೈಗಡವಾಗಿ 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಮಳೆಯಿಂದ ಹಾಳಾಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಕುಮಾರಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net