ಸಾಲಬಾಧೆಯಿಂದ ರೈತ ವಿಷ ಸೇವಿಸಿ ಆತ್ಮಹತ್ಯೆ

Crime
Crime
Published on

ಹಾನಗಲ್ಲ: ಸಾಲಬಾಧೆಯಿಂದ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹೇರೂರ ಗ್ರಾಮದಲ್ಲಿ ಗುರುವಾರ ನಡೆದಿದೆ.

ಭರಮಪ್ಪ ಚಿಕ್ಕಪ್ಪ ಹೊಸಗೌಡ್ರ (53) ಮೃತ ರೈತ.

ಇವರು ಕೃಷಿಗಾಗಿ ಬ್ಯಾಂಕ್ನಲ್ಲಿ 2.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಆದರೆ, ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸರಿಯಾಗಿ ಬಾರದೆ ಹಾಳಾಗಿ ಹೋಗಿದ್ದವು. ಇದರಿಂದ ಮನನೊಂದು ಮನೆಯಲ್ಲಿಯೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net