

ಹಾನಗಲ್ಲ: ಜಮೀನಿನಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ರೈತರೊಬ್ಬರು ಮೃತಪಟ್ಟ ಘಟನೆ ತಾಲೂಕಿನ ಹುಲ್ಲತ್ತಿ ಗ್ರಾಮದಲ್ಲಿ ನಡೆದಿದೆ.
ರಮೇಶ ಯಲ್ಲಪ್ಪ ಗೊಲ್ಲರ (38) ಮೃತ ರೈತ.
ಇವರು ಜಮೀನಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಸಮಯದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಮೃತಪಟ್ಟಿದ್ದಾರೆ. ಈ ಕುರಿತು ಹಾನಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.