ಸಾಲಬಾಧೆಯಿಂದ ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

Crime
Crime
Published on

ರಾಣೆಬೆನ್ನೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಅರೇಮಲ್ಲಾಪುರ ಗ್ರಾಮದಲ್ಲಿ ನಡೆದಿದೆ.

ಭೀಮಪ್ಪ ಹನುಮಪ್ಪ ಗೊಂಗಜ್ಜಿ (70) ಮೃತ ರೈತ.

ಇವರು ಬ್ಯಾಂಕ್ನಲ್ಲಿ ಸಾಲ ಮಾಡಿಕೊಂಡು ಕೃಷಿ ಮಾಡಿದ್ದರು. ಆದರೆ, ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸಂರ್ಪೂಣ ಹಾಳಾಗಿ ಹೋಗಿತ್ತು. ಇದರಿಂದ ಮನನೊಂದು ಮನೆಯಲ್ಲಿಯೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net