

ಹಾನಗಲ್ಲ: ಸಾಲಬಾಧೆಯಿಂದ ರೈತನೊಬ್ಬ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಹೇರೂರ ಗ್ರಾಮದಲ್ಲಿ ನಡೆದಿದೆ.
ಮಲ್ಲಪ್ಪ ಮಹದೇವಪ್ಪ ಹರಿಜನ (36) ಮೃತ ರೈತ.
ಇವರು ಬ್ಯಾಂಕ್ ಹಾಗೂ ವಿವಿಧ ಸಂಘಗಳಲ್ಲಿ 1.50 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಹಾಳಾಗಿ ಹೋಗಿತ್ತು. ಇದರಿಂದ ಮನನೊಂದು ಗ್ರಾಮದ ದೊಡ್ಡಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.