

ಸವಣೂರ: ಸಾಲಬಾಧೆಯಿಂದ ರೈತರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಇಚ್ಚಂಗಿ ಗ್ರಾಮದಲ್ಲಿ ನಡೆದಿದೆ.
ಮಂಜಪ್ಪ ಬಿದ್ದಪ್ಪ ಸೂರಣಗಿ (50) ಮೃತ ರೈತ.
ಇವರು ಬ್ಯಾಂಕ್ನಲ್ಲಿ 2 ಲಕ್ಷ ರೂ. ಸಾಲ ಮಾಡಿಕೊಂಡು ಕೃಷಿ ಮಾಡಿಕೊಂಡಿದ್ದರು. ಜಮೀನಿನಲ್ಲಿ ಬೆಳೆದಿದ್ದ ಬೆಳೆ ಸರಿಯಾಗಿ ಬಾರದ ಕಾರಣ ಸಾಲ ತೀರಿಸಲಾಗದೆ ಗ್ರಾಮದ ಹಳ್ಳದ ದಂಡೆಯ ಮೇಲಿನ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.