ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಬಂದ್ ಬೆಂಬಲಿಸಿ ರೈತರ ಪ್ರತಿಭಟನೆ

ಪ್ರತಿಭಟನೆ
ಪ್ರತಿಭಟನೆ
Published on

ರಾಣೆಬೆನ್ನೂರು: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಬೆಂಬಲ ವ್ಯಕ್ತಪಡಿಸಿ ಇಲ್ಲಿಯ ರಾಜ್ಯ ರೈತ ಸಂ ಹಾಗೂ ಹಸಿರು ಸೇನೆ ಸೇರಿ ವಿವಿಧ ಸಂಟನೆಗಳಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ಬಸ್ ನಿಲ್ದಾಣದ ವೃತ್ತದಲ್ಲಿ ವಾಹನ ಸಂಚಾರ ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ನಿರ್ಧಾರದ ವಿರುದ್ಧ ಘೋಷಣೆ ಕೂಗಿದರು.

ರೈತ ಸಂದ ತಾಲೂಕು ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ರಾಜ್ಯದ ರೈತರ ಹಿತಾಸಕ್ತಿಯನ್ನು ಕಡೆಗಣಿಸಿ ತಮಿಳುನಾಡಿಗೆ ನೀರು ಹರಿಸುವುದು ಸರಿಯಲ್ಲ. ಈಗಾಗಲೇ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಕೊರತೆ ಹಾಗೂ ನೀರಿನ ಸಮಸ್ಯೆ ಎದುರಾಗಿದ್ದು, ರೈತರ ಕೃಷಿ ಚಟುವಟಿಕೆಗಳಿಗೆ ನೀರಿನ ಅಗತ್ಯವಿದೆ.

ಕಾವೇರಿ ಜಲಾನಯನ ಪ್ರದೇಶದ ರೈತರ ಪರಿಸ್ಥಿತಿಯನ್ನು ಪರಿಗಣಿಸದೆ ತಮಿಳುನಾಡಿಗೆ ನೀರು ಹರಿಸಿದರೆ ರಾಜ್ಯದ ಕೃಷಿ ಮತ್ತು ಕುಡಿಯುವ ನೀರಿನ ಸಮಸ್ಯೆ ಮತ್ತಷ್ಟು ಗಂಭೀರವಾಗಲಿದೆ. ರಾಜ್ಯ ಸರ್ಕಾರ ಕೂಡಲೇ ನೀರು ಹರಿಸುವುದನ್ನು ನಿಲ್ಲಿಸಿ, ರಾಜ್ಯದ ಜಲ ಸಂಪನ್ಮೂಲ ಹಾಗೂ ರೈತರ ಹಿತಾಸಕ್ತಿ ರಕ್ಷಿಸಬೇಕು ಎಂದು ಆಗ್ರಹಿಸಿದರು.

ಸ್ಥಳಕ್ಕೆ ಬಂದ ತಹಸೀಲ್ದಾರ್ ಆರ್.ಎಚ್. ಭಾಗವಾನ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಪ್ರಮುಖರಾದ ಕಿರಣ ಗುಳೇದ, ಪ್ರಶಾಂತ ಬಾಳನಗೌಡ್ರ, ಈರಣ್ಣ ಕೊಂಡಜ್ಜಿ, ಪ್ರವಿಣ ಸರವಂದ, ಬಸವರಾಜ ಮೇಗಳಗೇರಿ, ಶಂಕರ ಬಾಕಿರ್, ಮಾಲತೇಶ ಜಿ.ಜಿ., ವೀರೇಶ ಬಾಕಿ, ನೀಲಮ್ಮ ಮೇಗಳಗೇರಿ, ಶೈಲಮ್ಮ ಹರನಗಿರಿ, ನಾಗಮ್ಮ ತಳವಾರ ಹಾಗೂ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net