Farmers ತಹಸೀಲ್ದಾರ್ ಕಚೇರಿ ಎದುರು ರೈತರ ಪ್ರತಿಭಟನೆ

Farmers ಬೆಳೆಹಾನಿ ಪರಿಹಾರ ವಿತರಣೆ, ಗೋವಿನಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಎಸ್.ರೇಣುಕಾ ಅವರಿಗೆ ಮನವಿ ಸಲ್ಲಿಸಿದರು. ಅಡಿವೆಪ್ಪ ಆಲದಕಟ್ಟಿ, ಮಾಲತೇಶ ಪರಪ್ಪನವರ, ಸೋಮಣ್ಣ ಜಡೆಗೊಂಡರ, ಮಹೇಶ ವಿರೂಪಣ್ಣನವರ, ಶ್ರೀಕಾಂತ ದುಂಡಣ್ಣನವರ, ರುದ್ರಪ್ಪ ಹಣ್ಣಿ, ವಾಸುದೇವ ಕಮಾಟಿ, ಮಹಲಿಂಗಪ್ಪ ಅಕ್ಕಿವಳ್ಳಿ, ರಾಜೀವ ದಾನಪ್ಪನವರ ಇದ್ದರು.
Farmers ಬೆಳೆಹಾನಿ ಪರಿಹಾರ ವಿತರಣೆ, ಗೋವಿನಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ತಹಸೀಲ್ದಾರ್ ಎಸ್.ರೇಣುಕಾ ಅವರಿಗೆ ಮನವಿ ಸಲ್ಲಿಸಿದರು. ಅಡಿವೆಪ್ಪ ಆಲದಕಟ್ಟಿ, ಮಾಲತೇಶ ಪರಪ್ಪನವರ, ಸೋಮಣ್ಣ ಜಡೆಗೊಂಡರ, ಮಹೇಶ ವಿರೂಪಣ್ಣನವರ, ಶ್ರೀಕಾಂತ ದುಂಡಣ್ಣನವರ, ರುದ್ರಪ್ಪ ಹಣ್ಣಿ, ವಾಸುದೇವ ಕಮಾಟಿ, ಮಹಲಿಂಗಪ್ಪ ಅಕ್ಕಿವಳ್ಳಿ, ರಾಜೀವ ದಾನಪ್ಪನವರ ಇದ್ದರು.
Published on
ಹಾನಗಲ್ಲ: ಬೆಳೆ ಹಾನಿ ಪರಿಹಾರ ವಿತರಣೆ, ಗೋವಿನಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತ ಸಂಘದ ಪದಾಧಿಕಾರಿಗಳು ಬುಧವಾರ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ರೈತ ಸಂಘದ ತಾಲೂಕು ಅಧ್ಯಕ್ಷ ಮರಿಗೌಡ ಪಾಟೀಲ ಮಾತನಾಡಿ, ಅತಿವೃಷ್ಟಿಯಿಂದ ಗೋವಿನಜೋಳ ಸೇರಿದಂತೆ ಅನೇಕ ಬೆಳೆಗಳು ತಾಲೂಕಿನಾದ್ಯಂತ ಕೈಕೊಟ್ಟಿವೆ. ಇಂಥ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರ ರೈತರಿಗೆ ಬೆಳೆಹಾನಿ ಪರಿಹಾರ ವಿತರಿಸುತ್ತಿಲ್ಲ. ನ.19 ರೊಳಗಾಗಿ ರೈತರ ಸಮಸ್ಯೆಗಳನ್ನು ಪರಿಹರಿಸದಿದ್ದರೆ ನ. 24 ರಂದು ಹಾವೇರಿಯಲ್ಲಿ ಹೆದ್ದಾರಿ ಸಂಚಾರ ತಡೆ ನಡೆಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಮುಂಗಾರಿನಲ್ಲಿ ಸುರಿದ ಮಳೆಯಿಂದ ಗೋವಿನಜೋಳ ಸೇರಿದಂತೆ ವಿವಿಧ ಬೆಳೆಗಳು ಹಾಳಾಗಿವೆ. ಅಲ್ಪ ಸ್ವಲ್ಪ ಉಳಿದ ಗೋವಿನಜೋಳ ರೈತರ ಕೈ ಹಿಡಿದಿದೆ. ಆದರೆ, ಮಾರುಕಟ್ಟೆಯಲ್ಲಿ ಗೋವಿನಜೋಳದ ದರ ಕುಸಿತವಾಗಿದೆ. ಕೂಡಲೇ ಸರ್ಕಾರ ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಆರಂಭಿಸಿ, ಕೇಂದ್ರ ಸರ್ಕಾರ ನಿಗದಿಪಡಿಸಿದ ಎಂಎಸ್​ಪಿ ದರ 2400 ರೂ. ಮತ್ತು ರಾಜ್ಯ ಸರ್ಕಾರದ 600 ರೂ. ಪ್ರೋತ್ಸಾಹಧನ ಸೇರಿಸಿ ಪ್ರತಿ ಕ್ವಿಂಟಾಲ್​ಗೆ ಒಟ್ಟು 3000 ರೂ. ನೀಡಬೇಕು ಎಂದು ಆಗ್ರಹಿಸಿದರು.
ಅಡಕೆ ಬೆಳೆ ವಿಮೆ ಪರಿಹಾರ ವಿತರಣೆ ಸಮರ್ಪಕವಾಗಿ ಆಗಿಲ್ಲ. ತಾಲೂಕಿನ ಹಳೇಕೋಟಿ, ಅರಳೇಶ್ವರ ಹಾಗೂ ಶಿರಗೋಡ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೈತರಿಗೆ ವಿಮೆ ಹಣ ಜಮೆ ಆಗಿಲ್ಲ. ತಾಲೂಕಿನ 4900 ರೂ. ಮಾವು ಬೆಳೆಗಾರರಲ್ಲಿ 4000 ರೈತರಿಗೆ ಮಾತ್ರ ಪರಿಹಾರ ಜಮೆ ಆಗಿದೆ. ಇನ್ನುಳಿದ 900 ರೈತರಿಗೆ ಜಮೆ ಆಗಿಲ್ಲ. ನ.19 ರೊಳಗಾಗಿ ಈ ಎಲ್ಲ ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಹಣ ಜಮೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ತಹಸೀಲ್ದಾರ್ ಎಸ್.ರೇಣುಕಾ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಅಡಿವೆಪ್ಪ ಆಲದಕಟ್ಟಿ, ಪದಾಧಿಕಾರಿಗಳಾದ ಮಾಲತೇಶ ಪರಪ್ಪನವರ, ಸೋಮಣ್ಣ ಜಡೆಗೊಂಡರ, ಮಹೇಶ ವಿರೂಪಣ್ಣನವರ, ಶ್ರೀಕಾಂತ ದುಂಡಣ್ಣನವರ, ರುದ್ರಪ್ಪ ಹಣ್ಣಿ, ವಾಸುದೇವ ಕಮಾಟಿ, ಮಹಲಿಂಗಪ್ಪ ಅಕ್ಕಿವಳ್ಳಿ, ರಾಜೀವ ದಾನಪ್ಪನವರ, ಇತರರಿದ್ದರು
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net