

ರಟ್ಟಿಹಳ್ಳಿ: ಮೀನು ಹಿಡಿಯಲು ಹೋದ ವ್ಯಕ್ತಿಯೊಬ್ಬ ಕುಮುದ್ವತಿ ನದಿಯಲ್ಲಿ ಮುಳಗಿ ಮೃತಪಟ್ಟ ಘಟನೆ ತಾಲೂಕಿನ ತಾಲೂಕಿನ ಕೋಡಮಗ್ಗಿ ಗ್ರಾಮದಲ್ಲಿ ನಡೆದಿದೆ.
ಚನ್ನಕೇಶವ ರುದ್ರಪ್ಪ ವಾಲ್ಮೀಕಿ (45) ಮೃತ ವ್ಯಕ್ತಿ.
ಈತ ಕುಮುದ್ವತಿ ನದಿಯಲ್ಲಿ ಮೀನು ಹಿಡಿಯಲು ಹೋದಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದಾನೆ. ಈ ಕುರಿತು ರಟ್ಟಿಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.