foot mouth disease ಕಾಲುಬಾಯಿ ರೋಗ ತಡೆಯಲು ಲಸಿಕೆ ಹಾಕಿಸಿ

ಹಿರೇಕೆರೂರಿನ ಪಶು ಆಸ್ಪತ್ರೆಯ ಆವರಣದಲ್ಲಿ ಹಿರೇಕೆರೂರ, ರಟ್ಟಿಹಳ್ಳಿ ತಾಲೂಕಿನಲ್ಲಿ ಜಾನುವಾರುಗಳಿಗೆ 8ನೇ ಸುತ್ತಿನ ಕಾಲುಬಾಯಿ ರೋಗ (foot mouth disease) ಲಸಿಕೆ ಹಾಕುವ ಕಾರ್ಯಕ್ಕೆ ಶಾಸಕ ಯು.ಬಿ. ಬಣಕಾರ ಚಾಲನೆ ನೀಡಿದರು.
ಹಿರೇಕೆರೂರಿನ ಪಶು ಆಸ್ಪತ್ರೆಯ ಆವರಣದಲ್ಲಿ ಹಿರೇಕೆರೂರ, ರಟ್ಟಿಹಳ್ಳಿ ತಾಲೂಕಿನಲ್ಲಿ ಜಾನುವಾರುಗಳಿಗೆ 8ನೇ ಸುತ್ತಿನ ಕಾಲುಬಾಯಿ ರೋಗ (foot mouth disease) ಲಸಿಕೆ ಹಾಕುವ ಕಾರ್ಯಕ್ಕೆ ಶಾಸಕ ಯು.ಬಿ. ಬಣಕಾರ ಚಾಲನೆ ನೀಡಿದರು.
Published on
ಹಿರೇಕೆರೂರ: ರೈತರು, ಸಾಕಣೆದಾರರು ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸುವ ಮೂಲಕ ಕಾಲುಬಾಯಿ ರೋಗ (foot mouth disease) ತಡೆಗಟ್ಟಲು ಸಹಕರಿಸಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಪಟ್ಟಣದ ಪಶು ಆಸ್ಪತ್ರೆಯ ಆವರಣದಲ್ಲಿ ಹಿರೇಕೆರೂರ, ರಟ್ಟಿಹಳ್ಳಿ ತಾಲೂಕಿನಲ್ಲಿ ಜಾನುವಾರುಗಳಿಗೆ 8ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕೆ ಹಾಕುವ ಕಾರ್ಯಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.
ಪಶು ವೈದ್ಯಾಧಿಕಾರಿ ಡಾ.ಕಿರಣ ಎಲ್., ಮಾತನಾಡಿ, ಡಿ. 12ರವರೆಗೆ ಈ ಕ್ಷೇತ್ರದಲ್ಲಿ ಕಾಲುಬಾಯಿ ರೋಗದ ಲಸಿಕೆ ಹಾಕುವ ಅಭಿಯಾನ ನಡೆಯಲಿದೆ. ಹಿರೇಕೆರೂರ ತಾಲೂಕಿನಲ್ಲಿ 28824, ರಟ್ಟಿಹಳ್ಳಿ ತಾಲೂಕಿನಲ್ಲಿ 27051 ಜಾನುವಾರುಗಳಿವೆ. ಇದಕ್ಕಾಗಿ 74 ಲಸಿಕಾದಾರರನ್ನು ನೇಮಿಸಲಾಗಿದ್ದು, ಅವರು ತಮ್ಮ ಗ್ರಾಮಗಳಿಗೆ ಆಗಮಿಸಿ ಲಸಿಕೆ ನೀಡಲಿದ್ದಾರೆ ಎಂದರು.
ಡಾ.ಮಂಜುನಾಥ ಮಾಯಾಚಾರಿ, ಪಶು ಪರೀಕ್ಷಕ ಹಾಲೇಶ ನಾಯಕ್ ಹಾಗೂ ಪಶು ವೈದ್ಯರು, ಸಿಬ್ಬಂದಿ, ರೈತರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net